ಮನೆ ಮನೆಗೆ ತೆರಳಿ ಮತಯಾಚನೆ: ಮಹಿಳಾ ಮತದಾರರ ಬೆಂಬಲ ಭರವಸೆ
ಬಾಗಲಕೋಟೆ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದ ಹಲವು ವಾರ್ಡ್ಗಳಲ್ಲಿ ಬಿಜೆಪಿ ಪರ ಮತಯಾಚನೆ ಜೋರಾಗಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಧರ್ಮಪತ್ನಿ ರಾಜೇಶ್ವರಿ ಅವರು ಮಹಿಳಾ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳ
ಮಹಿಳೆಯರು


ಬಾಗಲಕೋಟೆ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದ ಹಲವು ವಾರ್ಡ್ಗಳಲ್ಲಿ ಬಿಜೆಪಿ ಪರ ಮತಯಾಚನೆ ಜೋರಾಗಿದೆ.

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಧರ್ಮಪತ್ನಿ ರಾಜೇಶ್ವರಿ ಅವರು ಮಹಿಳಾ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ವೇಳೆ ಮಹಿಳಾ ಮತದಾರರೊಂದಿಗೆ ಮಾತನಾಡಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮಹಿಳಾ ಮತದಾರರು ಹೆಚ್ಚಾಗಿ ಇರುವುದರಿಂದ ಮಹಿಳಾ ಮತದಾರರ ಬೆಂಬಲ ಪಡೆಯಲು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದೆನೆಂದ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದು ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವುದಾಗಿ ಹಲವಾರು ಮಹಿಳಾ ಮತದಾರರು ಭರವಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಅಭಿವೃದ್ಧಿ ಮತ್ತು ಸುಶಾಸನದ ಪರವಾಗಿ ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande