
ಬಾಗಲಕೋಟೆ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಐವರು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರ ನೇತೃತ್ವದಲ್ಲಿ ಗೋವಿಂದ ಬಳ್ಳಾರಿ, ವೆಂಕಟೇಶ್ ಕಮತಗಿ, ಪ್ರಶಾಂತ ರಾವ್, ಅಜಿತ್ ಬಾಳಿಕಾಯಿ ಮತ್ತು ಆಯಬ ಬಾಗೇವಾಡಿ ಅವರು ತಮ್ಮ ನಾಮಪತ್ರಗಳನ್ನು ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಸಚಿವ ತಿಮ್ಮಾಪೂರ ಅವರು, “ಪಕ್ಷದ ಏಕತೆ ಮತ್ತು ಗೆಲುವಿನ ದೃಷ್ಟಿಯಿಂದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿರುವುದು ಶ್ಲಾಘನೀಯ ನಿರ್ಧಾರವಾಗಿದೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನಿಂದ ಸ್ಪರ್ಧಿಸಿ ಜಯ ಸಾಧಿಸುತ್ತದೆ” ಎಂದು ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ರಾಜು ಮಣಿಕೇರಿ, ಚಂದ್ರಶೇಖರ ರಾಠೋಡ್, ಲಕ್ಷಣ ಮುಚಖಂಡಿ, ಶರೀಫ್ ಮುಲ್ಲಾ, ಮುದುಕಣ್ಣ ಅಂಬಿಗೇರ, ರಜಾಕ್ ಬೆನ್ನೂರ, ಶಫೀಕ್ ಬೇಪಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande