ಬಂಗಾರ ಬೆಳ್ಳಿ ಬೆಲೆಯಲ್ಲಿ ಏರಿಕೆ
ನವದೆಹಲಿ, 26 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆಯಾಗಿದ್ದು, ಬೆಳ್ಳಿ ದರದಲ್ಲೂ ಅಲ್ಪ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,470 ರಿಂದ ₹3,780ರವರೆಗೆ ಏರಿಕೆಯಾಗಿದೆ. ಈ ಹಿನ್ನೆಲೆ, ದೇ
Gold silver


ನವದೆಹಲಿ, 26 ಮಾರ್ಚ್ (ಹಿ.ಸ.):

ಆ್ಯಂಕರ್:

ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಭರ್ಜರಿಯಾಗಿ ಏರಿಕೆಯಾಗಿದ್ದು, ಬೆಳ್ಳಿ ದರದಲ್ಲೂ ಅಲ್ಪ ಪ್ರಮಾಣದ ಹೆಚ್ಚಳ ಕಂಡುಬಂದಿದೆ.

ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹3,470 ರಿಂದ ₹3,780ರವರೆಗೆ ಏರಿಕೆಯಾಗಿದೆ. ಈ ಹಿನ್ನೆಲೆ, ದೇಶಾದ್ಯಂತ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,46,680ರಿಂದ ₹1,46,830ರ ವರೆಗೆ ವಹಿವಾಟು ನಡೆಸುತ್ತಿದೆ. ಅದೇ ರೀತಿ, 22 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,34,460ರಿಂದ ₹1,34,610ರ ವರೆಗೆ ಮಾರಾಟವಾಗುತ್ತಿದೆ.

ಬೆಳ್ಳಿ ಬೆಲೆಯಲ್ಲಿ ಕೇವಲ ₹100ರಷ್ಟು ಏರಿಕೆ ಕಂಡುಬಂದಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂಗೆ ₹2,50,100ಕ್ಕೆ ತಲುಪಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande