
ಉಡುಪಿ, 26 ಮಾರ್ಚ್ (ಹಿ.ಸ.):
ಆ್ಯಂಕರ್:ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು.
ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa