
ವಿಜಯಪುರ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ಕುಡಿದ ಮತ್ತಿನಲ್ಲಿ ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ ಚಾಲಕನನ್ನು ಸಾರ್ವಜನಿಕರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ.
ಟಿಎನ್ 30 ಬಿಹೆಚ್ 9639
ಸಂಖ್ಯೆಯ ಲಾರಿಯ ಚಾಲಕ ಮದ್ಯಪಾನ ಮಾಡಿಕೊಂಡು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಿದ್ದಾನೆ ಎಂದು ತಿಳಿದು ಬಂದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಎಚ್ಚರಿಕೆ ತೋರಿಸಿ ಬಸವನ ಬಾಗೇವಾಡಿ ತಹಶೀಲ್ದಾರ್ ಕಚೇರಿ ಎದುರು ಲಾರಿಯನ್ನು ನಿಲ್ಲಿಸಿದರು.
ಅನಂತರ ಸಾರ್ವಜನಿಕರು ವಾಹನ ಮಾಲೀಕರಿಗೆ ಹಾಗೂ ಪೊಲೀಸರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ಮಾಹಿತಿ ಪಡೆದ ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande