
ಕೊಪ್ಪಳ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2025-26 ನೇ ಸಾಲಿಗೆ ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನುಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕುಗಳ ಮೂಲಕ ಸಾಲದ ಸೌಲಭ್ಯ ಒದಗಿಸಿ, ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಗಳನ್ನು ವಿತರಿಸಲು ಆಸಕ್ತ ಮೀನುಗಾರರು ಅಥವಾ ಮೀನು ಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೀನುಗಾರಿಕೆ ಮಾಡುತ್ತಿರುವ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಿ, ಬ್ಯಾಂಕ್ಗಳಿಂದ ಆರ್ಥಿಕ ಸಹಾಯಧನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಕುಕನೂರು ಮತ್ತು ಯಲಬುರ್ಗಾ ತಾಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್