ಬಳ್ಳಾರಿ ಗ್ರಾಮೀಣ : ಮಾ.27 ರಂದು ವಿದ್ಯುತ್ ಗ್ರಾಹಕರ ಸಭೆ
ಬಳ್ಳಾರಿ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಗ್ರಾಮೀಣ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ಮತ್ತು ಇತ್ಯರ್ಥಗೊಳಿಸಲು ಮಾ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗ
ಬಳ್ಳಾರಿ ಗ್ರಾಮೀಣ : ಮಾ.27 ರಂದು ವಿದ್ಯುತ್ ಗ್ರಾಹಕರ ಸಭೆ


ಬಳ್ಳಾರಿ, 26 ಮಾರ್ಚ್ (ಹಿ.ಸ.)

ಆ್ಯಂಕರ್ :

ಬಳ್ಳಾರಿ ಗ್ರಾಮೀಣ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ಮತ್ತು ಇತ್ಯರ್ಥಗೊಳಿಸಲು ಮಾ.27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.

ಗ್ರಾಹಕರು ತಮ್ಮ ವಿದ್ಯುತ್ ಸಂಪರ್ಕ, ಬಿಲ್ಲಿಂಗ್ ಸಮಸ್ಯೆಗಳು, ವೋಲ್ಟೇಜ್ ಏರುಪೇರು ಸೇರಿದಂತೆ ಇತರೆ ಯಾವುದೇ ದೂರು ಅಥವಾ ಸಲಹೆಗಳಿದ್ದಲ್ಲಿ ಸಭೆಯಲ್ಲಿ ಭಾಗವಹಿಸಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande