ಮಾ. 30 ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
ಶಿವಮೊಗ್ಗ, 26 ಮಾರ್ಚ್ (ಹಿ.ಸ.): ಆ್ಯಂಕರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ.30 ರ ಸಂಜೆ 4.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನ
ಮಾ. 30 ರಂದು ಭಗವಾನ್ ಶ್ರೀ ಮಹಾವೀರ ಜಯಂತಿ


ಶಿವಮೊಗ್ಗ, 26 ಮಾರ್ಚ್ (ಹಿ.ಸ.):

ಆ್ಯಂಕರ್:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸಮಾಜದ ವಿವಿಧ ಸಂಘಟನೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ.30 ರ ಸಂಜೆ 4.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು. ಸಾಗರದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ವಿ.ಟಿ.ಸ್ವಾಮಿ ಇವರು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande