ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಏ.12 ರಂದು ಪ್ರವೇಶ ಪರೀಕ್ಷೆ
ಬಳ್ಳಾರಿ, 26 ಮಾರ್ಚ್ (ಹಿ.ಸ.): ಆ್ಯಂಕರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಯ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಏ.12 ರಂದು ಪ್ರವೇಶ ಪರೀಕ್ಷೆ


ಬಳ್ಳಾರಿ, 26 ಮಾರ್ಚ್ (ಹಿ.ಸ.):

ಆ್ಯಂಕರ್ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಯ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಥವಾ ದೂ.08392-200125/224, ಸಹಾಯವಾಣಿ ಕೇಂದ್ರ (24*7) – 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande