ಶನಿವಾರ ಪ್ರಧಾನಿಯಿಂದ ನೋಯ್ಡಾ ವಿಮಾನ ನಿಲ್ದಾಣ ಉದ್ಘಾಟನೆ
ನವದೆಹಲಿ, 26 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28ರಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ (ಜೇವರ್) ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ₹11,200 ಕೋಟಿ ವೆಚ್ಚದ ಈ ಗ್ರೀನ್‌ಫೀಲ್ಡ್ ಯ
Pm


ನವದೆಹಲಿ, 26 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28ರಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ (ಜೇವರ್) ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

₹11,200 ಕೋಟಿ ವೆಚ್ಚದ ಈ ಗ್ರೀನ್‌ಫೀಲ್ಡ್ ಯೋಜನೆ ಮೊದಲ ಹಂತದಲ್ಲಿ ವರ್ಷಕ್ಕೆ 12 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯ ಹೊಂದಿದ್ದು, ಮುಂದಿನ ದಿನಗಳಲ್ಲಿ 70 ಮಿಲಿಯನ್‌ಗೆ ವಿಸ್ತರಿಸುವ ಯೋಜನೆ ಇದೆ.

3,900 ಮೀಟರ್ ರನ್‌ವೇ, 24x7 ಎಲ್ಲಾ ಹವಾಮಾನ ಕಾರ್ಯಾಚರಣೆ, ಆಧುನಿಕ ಸಂಚರಣಾ ವ್ಯವಸ್ಥೆಗಳು ಈ ವಿಮಾನ ನಿಲ್ದಾಣದ ವಿಶೇಷತೆಗಳಾಗಿವೆ. ಇದು ದೆಹಲಿ ಎನ್ ಸಿಆರ್ ಪ್ರದೇಶದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡಲಿದೆ.

ಯಮುನಾ ಎಕ್ಸ್‌ಪ್ರೆಸ್‌ವೇ ಸಂಪರ್ಕದೊಂದಿಗೆ ನಿರ್ಮಾಣಗೊಂಡ ಈ ಯೋಜನೆ ದೇಶದ ವಾಯುಯಾನ ಕ್ಷೇತ್ರಕ್ಕೆ ಹೊಸ ಉತ್ತೇಜನ ನೀಡಲಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande