ಶ್ರೀರಾಮನ ಆದರ್ಶ ಅಳವಡಿಸಿಕೊಳ್ಳಲು ಮುಖ್ಯಮಂತ್ರಿ ಕರೆ
ಬೆಂಗಳೂರು, 26 ಮಾರ್ಚ್ (ಹಿ.ಸ.): ಆ್ಯಂಕರ್: ರಾಮ ನವಮಿ ಹಬ್ಬದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ತಮ್ಮ ಎಕ್ಸ ಸಂದೇಶದಲ್ಲಿ ಅವರು, “ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ವಚನ ಪಾಲನೆ, ಪ್ರಜಾಸೇವೆಯ ಬದ್ಧತೆ, ನ್ಯಾಯ ನಿಷ್ಠೆ ಹಾಗೂ ಪ್ರೀತಿ
Cm


ಬೆಂಗಳೂರು, 26 ಮಾರ್ಚ್ (ಹಿ.ಸ.):

ಆ್ಯಂಕರ್:

ರಾಮ ನವಮಿ ಹಬ್ಬದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ತಮ್ಮ ಎಕ್ಸ ಸಂದೇಶದಲ್ಲಿ ಅವರು, “ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ವಚನ ಪಾಲನೆ, ಪ್ರಜಾಸೇವೆಯ ಬದ್ಧತೆ, ನ್ಯಾಯ ನಿಷ್ಠೆ ಹಾಗೂ ಪ್ರೀತಿ–ಮಮತೆಯ ಮಾನವೀಯ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀರಾಮನ ನಡೆ–ನುಡಿಗಳು ನಮ್ಮ ಆದರ್ಶವಾಗಲಿ” ಎಂದು ಹೇಳಿದ್ದಾರೆ.

“ಪಾನಕ–ಕೋಸಂಬರಿಯ ಸಿಹಿತನದೊಂದಿಗೆ ಸ್ನೇಹ–ಸೌಹಾರ್ದತೆ ಮಿಳಿತಗೊಂಡು, ದ್ವೇಷ ಅಳಿದು ಪ್ರೀತಿಯ ಬೆಳಕು ಎಲ್ಲೆಡೆ ಪಸರಿಸಲಿ” ಎಂದು ಹಾರೈಸಿದ್ದಾರೆ.

ರಾಜ್ಯದ ಸಮಸ್ತ ಜನತೆಗೆ ರಾಮನವಮಿಯ ಶುಭಾಶಯಗಳನ್ನು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande