
ಧಾರವಾಡ, 27 ಮಾರ್ಚ್ (ಹಿ.ಸ.):
ಆ್ಯಂಕರ್:
ಮಕ್ಕಳ ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಎಪ್ರಿಲ್ ಹಾಗೂ ಮೇ-2026 ರ ತಿಂಗಳಲ್ಲಿ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ.
ಶಿಬಿರದಲ್ಲಿ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಪಾಲಕರಿಗೆ ಮಕ್ಕಳ ಪೌಷ್ಟಿಕ ಆಹಾರ, ಆರೋಗ್ಯ ಹಾಗೂ ಜೀವನಶೈಲಿ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಯೋಗ ತರಬೇತಿಯನ್ನು ಹಾಗೂ ಪ್ರತಿ ಬುಧವಾರ ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಮಕ್ಕಳ ಆಹಾರ ಮತ್ತು ಆರೋಗ್ಯಕರ ಜೀವನಶೈಲಿ ಕುರಿತು ಪಾಲಕರಿಗೆ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನವನ್ನು ನೀಡಲಿದ್ದಾರೆ.
ಆಸಕ್ತ ಮಕ್ಕಳು ಮತ್ತು ಪಾಲಕರು ಎಪ್ರಿಲ್ 05, 2026 ರೊಳಗೆ ದೂರವಾಣಿ: 8050392209 ಗೆ ಕರೆ ಮಾಡಿ, ಶಿಬಿರಕ್ಕೆ ನೊಂದಾಯಿಸಿಕೊಳ್ಳಬಹುದೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa