ಬಾಗಲಕೋಟೆ ಉಪಚುನಾವಣೆ: ಬಿಲ್ ಕೆರೂರ್ ಗ್ರಾಮದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ವಿವಿಧ ಪಕ್ಷಗಳಲ್ಲಿ ಸೇರ್ಪಡೆ ಮತ್ತು ತೊರೆಯುವ ಘಟನೆಗಳು ನಡೆಯುತ್ತಿವೆ. ಇದರ ಭಾಗವಾಗಿ ಬಾಗಲಕೋಟೆ ತಾಲೂಕಿನ ಬಿಲ್ ಕೆರೂರ್ ಗ್ರ
ಸೇರಿದ


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಿದ್ದು, ವಿವಿಧ ಪಕ್ಷಗಳಲ್ಲಿ ಸೇರ್ಪಡೆ ಮತ್ತು ತೊರೆಯುವ ಘಟನೆಗಳು ನಡೆಯುತ್ತಿವೆ.

ಇದರ ಭಾಗವಾಗಿ ಬಾಗಲಕೋಟೆ ತಾಲೂಕಿನ ಬಿಲ್ ಕೆರೂರ್ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಸಮ್ಮುಖದಲ್ಲಿ ನೂರಾರು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಸ್ವೀಕರಿಸಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಯುವಕರು ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಜನಪರ ಆಡಳಿತದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande