
ಬಾಗಲಕೋಟೆ, 27 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಬಾಗಲಕೋಟೆಯಲ್ಲಿ ನಡೆದ ಈ ಭೇಟಿಯಲ್ಲಿ ಉಪಚುನಾವಣೆಯ ಸಿದ್ಧತೆಗಳು, ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಪ್ರಚಾರ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಕಲ್ಮೇಶ ಸಾರವಾಡ್, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ (ವಕೀಲರು), ಮುಖಂಡರಾದ ಲಕ್ಷ್ಮಣ ಮಾಲಗಿ, ದ್ಯಾಮಣ್ಣ ಗಾಳಿ, ಹೊಳಬಸು ದಂಡಿನ್, ಪರಮಾನಂದ ಕುಟ್ಟರಟ್ಟಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande