ಬಾಗಲಕೋಟೆ ಉಪಚುನಾವಣೆ: ಕಿರಸೂರಿನಲ್ಲಿ ಗೋವಿಂದ ಕಾರಜೋಳ ಪ್ರಚಾರ, ವೀರಣ್ಣ ಚರಂತಿಮಠ ಪರ ಮತಯಾಚನೆ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಸಂಸದರಾದ ಗೋವಿಂದ ಎಂ. ಕಾರಜೋಳ ಅವರು ಕಿರಸೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದರು. ಗ್ರಾಮದ ಹಿರಿಯರ
ಕಾರಜೋಳ್


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಚಿತ್ರದುರ್ಗ ಸಂಸದರಾದ ಗೋವಿಂದ ಎಂ. ಕಾರಜೋಳ ಅವರು ಕಿರಸೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದರು.

ಗ್ರಾಮದ ಹಿರಿಯರು ಹಾಗೂ ಸಮಾಜದ ಬಾಂಧವರನ್ನು ಭೇಟಿ ಮಾಡಿ ಆತ್ಮೀಯವಾಗಿ ಸಂವಾದ ನಡೆಸಿದ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.

ಮುಂಬರುವ ದಿನಗಳಲ್ಲಿ ಕ್ಷೇತ್ರದ ಇನ್ನಷ್ಟು ಪ್ರಗತಿಗಾಗಿ ಚರಂತಿಮಠ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಆಶೀರ್ವದಿಸಬೇಕೆಂದು ಗ್ರಾಮಸ್ಥರಲ್ಲಿ ಮನವಿ ಅವರು ಮಾಡಿದರು.

ಈ ವೇಳೆ ಕಿರಸೂರು ಗ್ರಾಮದ ಜನರು ಉತ್ತಮ ಬೆಂಬಲ ಮತ್ತು ಉತ್ಸಾಹ ತೋರಿದ್ದು, ಇದು ಬಿಜೆಪಿಗೆ ವಿಜಯದ ಸಂಕೇತವಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande