ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ತಂತ್ರಗಾರಿಕಾ ಸಭೆ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ಪ್ರಮುಖ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಅವರು ಉಪಚುನಾವಣೆಯ ತಂತ್ರಗಾರ
ಸಭೆ


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ಪ್ರಮುಖ ಸಭೆ ನಡೆಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ್ ಅವರು ಉಪಚುನಾವಣೆಯ ತಂತ್ರಗಾರಿಕೆ, ಪ್ರಚಾರ ಕಾರ್ಯಕ್ರಮಗಳು ಹಾಗೂ ಕಾರ್ಯಕರ್ತರ ಸಂಘಟನೆಯ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲ, ಬಸವರಾಜ ಯಕಂಚಿ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆಯಲ್ಲಿ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ನಾಯಕರು ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande