
ಬಾಗಲಕೋಟೆಯಲ್ಲಿ, 27 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮಲು ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ನಗರದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ನಗರದ ವಿವಿಧ ವಾರ್ಡ್ಗಳಲ್ಲಿ ಮತದಾರರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ ಶ್ರೀರಾಮಲು, ಪಕ್ಷದ ಕಾರ್ಯಕರ್ತರೊಂದಿಗೆ ಉತ್ಸಾಹಭರಿತವಾಗಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಣ್ಣ ಚರಂತಿಮಠರು ಈ ಹಿಂದೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಬಾಗಲಕೋಟೆ ರಾಜಕೀಯ ಇತಿಹಾಸದಲ್ಲಿ ಚರಂತಿಮಠರು ಉತ್ತಮ ಜನಪ್ರಿಯತೆ ಪಡೆದುಕೊಂಡ ನಾಯಕರಾಗಿದ್ದು, ಅವರ ಅಭಿವೃದ್ಧಿಯ ಹೆಜ್ಜೆ ಗುರುತುಗಳನ್ನು ಕ್ಷೇತ್ರದ ಜನರು ಮರೆತಿಲ್ಲ, ಮರೆಯುವುದಿಲ್ಲ ಎಂದು ಹೇಳಿದರು.
ಅದರ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ವೀರಣ್ಣ ಚರಂತಿಮಠರು ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಮಲು ಅವರಿಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande