ಬಾಗಲಕೋಟೆ ಉಪಚುನಾವಣೆ: ಗುಜರಾತಿ ಸಮಾಜದೊಂದಿಗೆ ಸಂಸದ ಶೆಟ್ಟರ್ ಸಂವಾದ, ವೀರಣ್ಣ ಚರಂತಿಮಠ ಪರ ಮತಯಾಚನೆ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಪ್ರಚಾರ ಕಾರ್ಯವನ್ನು ನಡೆಸಿದರು. ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗುಜರಾತಿ ಸಮಾಜದ ಬಾಂಧವರೊಂ
ಶೆಟ್ಟರ್


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಪ್ರಚಾರ ಕಾರ್ಯವನ್ನು

ನಡೆಸಿದರು.

ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗುಜರಾತಿ ಸಮಾಜದ ಬಾಂಧವರೊಂದಿಗೆ ಸಂವಾದ ನಡೆಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಶೆಟ್ಟರ್, ವೀರಣ್ಣ ಚರಂತಿಮಠ ಅವರು ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವ ನಾಯಕರು ಎಂದು ಹೇಳಿ, ಉಪಚುನಾವಣೆಯಲ್ಲಿ ಅವರಿಗೆ ಬೆಂಬಲ ನೀಡುವಂತೆ ಸಮಾಜದ ಸದಸ್ಯರನ್ನು ಕೋರಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಸಚಿವ ಬಿ. ಶ್ರೀರಾಮುಲು, ಇಂದ್ರಜಿತ್ ದರ್ಬಾರ್, ರಾಜೇಶ್ ಗುಜ್ಜಾರ್, ದಿನೇಶ್ ಬಾರ್ಸಿ, ದಿವೇಶ್ ಪಾರಿಕ್, ಗೌತಮ್ ಗೌರಂಪುರ್ ಸೇರಿದಂತೆ ಹಲವು ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande