
ನವದೆಹಲಿ, 27 ಮಾರ್ಚ್ (ಹಿ.ಸ.):
ಆ್ಯಂಕರ್:
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮವಾಗಿ ಜಾಗತಿಕ ಇಂಧನ ದರಗಳು ಏರಿಕೆಯಾಗುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ತಕ್ಷಣದ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10ರಷ್ಟು ಕಡಿತಗೊಳಿಸಿದೆ.
ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ₹13ರಿಂದ ₹3ಕ್ಕೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ಸುಂಕವನ್ನು ₹10ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಈ ಹೊಸ ದರಗಳು ಶುಕ್ರವಾರದಿಂದ ಜಾರಿಗೆ ಬಂದಿವೆ.
ಸರ್ಕಾರದ ಈ ಕ್ರಮದಿಂದ ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳಲ್ಲಿ ಇಳಿಕೆ ಕಾಣುವ ನಿರೀಕ್ಷೆ ವ್ಯಕ್ತವಾಗಿದ್ದು, ಸಾರಿಗೆ ವೆಚ್ಚ ಕಡಿಮೆಯಾಗುವ ಮೂಲಕ ದೈನಂದಿನ ಉಪಯೋಗ ವಸ್ತುಗಳ ಬೆಲೆ ಏರಿಕೆಗೆ ತಾತ್ಕಾಲಿಕ ತಡೆ ಸಿಗಬಹುದು ಎಂದು ಅಂದಾಜಿಸಲಾಗಿದೆ.
ಇದೇ ವೇಳೆ, ವಾಯುಯಾನ ಟರ್ಬೈನ್ ಇಂಧನ ಮೇಲೂ ಹೊಸ ಸುಂಕ ರಚನೆ ಜಾರಿಗೆ ತರಲಾಗಿದ್ದು, ಪ್ರತಿ ಲೀಟರ್‌ಗೆ ₹50 ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲಾಗಿದೆ. ಆದರೆ, ನಿರ್ದಿಷ್ಟ ರಿಯಾಯಿತಿಗಳ ಮೂಲಕ ಪರಿಣಾಮಕಾರಿ ಸುಂಕವನ್ನು ಸಮತೋಲನಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಸೂಚನೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa