
ಬೆಂಗಳೂರು, 27 ಮಾರ್ಚ್ (ಹಿ.ಸ.):
ಆ್ಯಂಕರ್:ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಇಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಇದೇ ವೇಳೆ ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಹಲವು ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳುವಲ್ಲಿ ಎದುರಾಗಿರುವ ಅಡಚಣೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಸೂಚನೆ ನೀಡಲಾಯಿತು. ಕಾಮಗಾರಿಗಳ ಪ್ರಗತಿ ವೇಗಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ಸಚಿವರು ನೀಡಿದರು.
ಇದೇ ಸಂದರ್ಭದಲ್ಲಿ ನಾಗಮಂಗಲ ತಾಲೂಕಿನ ಪ್ರಮುಖ ರಸ್ತೆಗಳಲ್ಲಿ ಬಸ್ ನಿಲ್ದಾಣಗಳ ಸಮೀಪ ಬಸ್ಸುಗಳನ್ನು ನಿಲ್ಲಿಸಲು ಅನುಕೂಲವಾಗುವಂತೆ ರಸ್ತೆ ಅಗಲೀಕರಣ ಕೈಗೊಳ್ಳುವಂತೆ ಆದೇಶಿಸಲಾಯಿತು. ಸಾರ್ವಜನಿಕರ ಸಂಚಾರ ಸುಗಮತೆ ಮತ್ತು ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.
ರಸ್ತೆ ಅಗಲೀಕರಣ ಹಾಗೂ ಸರ್ಕಾರಿ ಕಟ್ಟಡಗಳ ನಿರ್ಮಾಣದ ವೇಳೆ ಸಾರ್ವಜನಿಕರ ಆಸ್ತಿಗೆ ಹಾನಿಯಾಗುವ ಅಥವಾ ಭೂಸ್ವಾಧೀನವಾಗುವ ಸಂದರ್ಭಗಳಲ್ಲಿ ತಕ್ಕ ಪರಿಹಾರ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪ್ರಭಾವಿತ ನಾಗರಿಕರಿಗೆ ನಿಯಮಾನುಸಾರ ಸಮರ್ಪಕ ಪರಿಹಾರ ಒದಗಿಸಬೇಕೆಂದು ಸಚಿವರು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa