ಡಿ ಕೆ ಶಿವಕುಮಾರ ಗುರು ಒಬ್ಬ ರೌಡಿ-ಗುರುವಿನಂತೆ ಶಿಷ್ಯ-ಶ್ರೀರಾಮಲು ವಾಗ್ದಾಳಿ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಚಿವ ಬಿ. ಶ್ರೀರಾಮಲು ಅವರು ಅಬ್ಬರದ ಪ್ರಚಾರ ನಡೆಸಿದರು. ನಗರದ ಬಹುತೇಕ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿದ ಅವರು, ಬಿಜೆಪ
ರಾಮಲು


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮಾಜಿ ಸಚಿವ ಬಿ. ಶ್ರೀರಾಮಲು ಅವರು ಅಬ್ಬರದ ಪ್ರಚಾರ ನಡೆಸಿದರು.

ನಗರದ ಬಹುತೇಕ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಹ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಪ್ರಚಾರದ ವೇಳೆ ಮಾತನಾಡಿದ ಶ್ರೀರಾಮಲು, ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸುವುದು ಸ್ಪಷ್ಟವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ರಾಹುಲ್ ಗಾಂಧಿ ಇವಿಎಂ ಮೂಲಕ ಚುನಾವಣೆ ನಡೆಸಿದರೆ ನಷ್ಟವಾಗುತ್ತದೆ ಎಂದು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಇವಿಎಂ ಮೂಲಕವೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಬಗ್ಗೆ ಅವರು ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮಾತಿನ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮಲು, “ಗುರುವಿನಂತೆ ಶಿಷ್ಯ ಇರಲೇಬೇಕಲ್ಲವೇ. ಅವರ ಗುರುಗಳು ಒಂದು ಕಾಲದಲ್ಲಿ ದೊಡ್ಡ ರೌಡಿ ಆಗಿದ್ದವರು. ಅವರಂತೆಯೇ ಎಲ್ಲೆಂದರಲ್ಲಿ ನಾಲಿಗೆ ಹರಿಬಿಡುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande