ನೇಪಾಳದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ
ನವದೆಹಲಿ, 27 ಮಾರ್ಚ್ (ಹಿ.ಸ.): ಆ್ಯಂಕರ್:ನರೇಂದ್ರ ಮೋದಿ ಅವರು ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಶಾ ಅವರ ನೇಮಕಾತಿ ನೇಪಾಳದ ಜನರು ಅವರ ನಾಯಕತ್ವದ ಮೇಲೆ ಇಟ್ಟಿರುವ
Pm


ನವದೆಹಲಿ, 27 ಮಾರ್ಚ್ (ಹಿ.ಸ.):

ಆ್ಯಂಕರ್:ನರೇಂದ್ರ ಮೋದಿ ಅವರು ನೇಪಾಳದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಶಾ ಅವರ ನೇಮಕಾತಿ ನೇಪಾಳದ ಜನರು ಅವರ ನಾಯಕತ್ವದ ಮೇಲೆ ಇಟ್ಟಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ನೇಪಾಳ ನಡುವಿನ ಸ್ನೇಹಪೂರ್ಣ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಹಾಗೂ ಸಹಕಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಶಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವ ನಿರೀಕ್ಷೆಯಲ್ಲಿದ್ದೇನೆ ಎಂದು ಮೋದಿ ಹೇಳಿದ್ದಾರೆ. ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯವು ಪರಸ್ಪರ ಹಿತಾಸಕ್ತಿಗೆ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಹೇಳಿದ್ದಾರೆ.

“ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ನಮ್ಮ ಎರಡು ದೇಶಗಳ ಸ್ನೇಹ ಹಾಗೂ ಸಹಕಾರ ಮತ್ತಷ್ಟು ವೃದ್ಧಿಯಾಗಲಿದೆ” ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande