
ಬಳ್ಳಾರಿ, 27 ಮಾರ್ಚ್ (ಹಿ.ಸ.):
ಆ್ಯಂಕರ್ : ಪೌರಾಡಳಿತ ನಿರ್ದೇಶನಾಲಯದ ಆದೇಶ ಹಾಗೂ ಕುರೇಕುಪ್ಪ ಪುರಸಭೆಯ ಸಾಮಾನ್ಯ ಸಭೆಯ ತೀರ್ಮಾನದಂತೆ ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಅನ್ವಯವಾಗುವಂತೆ ಆಸ್ತಿ ತೆರಿಗೆಯನ್ನು ಶೇ.03 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
2025-27ನೇ ಆರ್ಥಿಕ ಸಾಲಿನಲ್ಲಿ ಮಾರುಕಟ್ಟೆ ದರಸೂಚಿಗಳು ಪರಿಷ್ಕರಣೆಯಾಗದಿದ್ದ ಪಕ್ಷದಲ್ಲಿ, ಆಸ್ತಿ ತೆರಿಗೆಯನ್ನು ಕನಿಷ್ಠ ಶೇ.03 ರಿಂದ ಶೇ.05 ರಷ್ಟು ಹೆಚ್ಚಿಸಲು ಸೂಚಿಸಲಾಗಿತ್ತು.
ಕುರೇಕುಪ್ಪ ಪುರಸಭೆಯ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ಕನಿಷ್ಠ ಪ್ರಮಾಣದ ಹೆಚ್ಚಳಕ್ಕೆ ಅಂದರೆ, ಶೇ.03 ರಷ್ಟು ತೆರಿಗೆಯನ್ನು ಹೆಚ್ಚುವರಿ ಮಾಡಲು ಸಭೆಯು ಅನುಮೋದನೆ ನೀಡಿದೆ.
ಹಾಗಾಗಿ 2026-27ನೇ ಸಾಲಿನಿಂದ ಜಾರಿಗೆ ಬರುವಂತೆ ಆಸ್ತಿ ತೆರಿಗೆ ದರದಲ್ಲಿ ಶೇ.03 ರಷ್ಟು ಪರಿಷ್ಕರಣೆ ಮಾಡಲಾಗಿದ್ದು, ಪುರಸಭೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಆಸ್ತಿ ಮಾಲೀಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್