ಪಶ್ಚಿಮ ಏಷ್ಯಾ ಬಿಕ್ಕಟ್ಟು: ಮುಖ್ಯಮಂತ್ರಿಗಳ ಜೊತೆ ಇಂದು ಮೋದಿ ಸಭೆ
ನವದೆಹಲಿ, 27 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ ಇಂದು ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ. ಯುದ್ಧದ ಪರಿಣಾಮಗಳಿಂದ ಸಾರ್ವಜನಿಕರನ್ನು ರಕ್ಷಿಸುವುದು ಹಾಗೂ ಅಗತ್ಯ ಸನ್
Pm


ನವದೆಹಲಿ, 27 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ ಇಂದು ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ. ಯುದ್ಧದ ಪರಿಣಾಮಗಳಿಂದ ಸಾರ್ವಜನಿಕರನ್ನು ರಕ್ಷಿಸುವುದು ಹಾಗೂ ಅಗತ್ಯ ಸನ್ನದ್ಧತೆ ಕುರಿತು ಚರ್ಚೆ ನಡೆಯಲಿದೆ.

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆ, ವಿಶೇಷವಾಗಿ ಇರಾನ್ ಸಂಬಂಧಿತ ಉದ್ವಿಗ್ನತೆ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಮತ್ತು ಪೂರೈಕೆ ನಿರ್ವಹಣೆಯ ಕುರಿತು ಪ್ರಧಾನಿ ಮಾರ್ಗದರ್ಶನ ನೀಡಲಿದ್ದಾರೆ.

ಈಗಾಗಲೇ ಪ್ರಧಾನಿ ಮೋದಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಸರ್ವಪಕ್ಷ ಸಭೆಯಲ್ಲಿಯೂ ಚರ್ಚೆ ನಡೆಸಿದ್ದಾರೆ. ‘ಟೀಮ್ ಇಂಡಿಯಾ’ ಮನೋಭಾವದಡಿ ಕೇಂದ್ರ-ರಾಜ್ಯ ಸಮನ್ವಯ ಬಲಪಡಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ.

ಇದಲ್ಲದೆ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಗಳು ನಡೆಯಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande