
ಬಾಗಲಕೋಟೆ, 27 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ತಾಲ್ಲೂಕಿನ ಬೆನಕಟ್ಟಿ ಗ್ರಾಮದಲ್ಲಿ ಶುಕ್ರವಾರ ರಾಮನವಮಿ ಹಬ್ಬದ ಅಂಗವಾಗಿ ಯಲ್ಲಾಲಿಂಗ ಮಹಾರಾಜರ ಪಲ್ಲಕ್ಕಿ ಉತ್ಸವ ಭಕ್ತಿಭಾವದಿಂದ ಹಾಗೂ ಅದ್ಧೂರಿಯಾಗಿ ಜರುಗಿತು.
ಹಬ್ಬದ ನಿಮಿತ್ತ ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಗ್ರಾಮದಲ್ಲಿ ಸಂಭ್ರಮದ ವಾತಾವರಣ ಕಂಡು ಬಂತು. ಯಲ್ಲಾಲಿಂಗ ಮಹಾರಾಜರ ಪಲ್ಲಕ್ಕಿಯನ್ನು ಗ್ರಾಮದೆಲ್ಲೆಡೆ ಮೆರವಣಿಗೆಯಾಗಿ ಕರೆದುಕೊಂಡು ಹೋಗಲಾಯಿತು.
ಮೆರವಣಿಗೆಯಲ್ಲಿ ಮಹಿಳೆಯರು ಕುಂಬವನ್ನು ತಲೆಯ ಮೇಲೆ ಹೊತ್ತು ಗ್ರಾಮದ ಬಹುತೇಕ ವೃತ್ತಗಳಲ್ಲಿ ಸಂಚರಿಸಿ ರಾಮ ನವಮಿ ಹಬ್ಬದ ಜಾಗೃತಿ ಮೂಡಿಸಿದರು. ಅಸಂಖ್ಯಾತ ಭಕ್ತರು ಭಜನೆ, ಕೀರ್ತನೆಗಳನ್ನು ಹಾಡುತ್ತಾ ಭಾಗವಹಿಸಿದರು.
ಪಲ್ಲಕ್ಕಿ ಉತ್ಸವದಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು. ಹಬ್ಬದ ಅಂಗವಾಗಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಕೂಡ ನಡೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande