ಬಾದಾಮಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಬಾದಾಮಿ ನಗರ ಪೊಲೀಸರು ಇಂದು ಯಶಸ್ವಿಯಾಗಿ ಆಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ವಿವಿಧ ವಿಧಗಳು, ಆನ್ಲೈ
ಸೈಬರ್


ಬಾಗಲಕೋಟೆ, 27 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮವನ್ನು ಬಾದಾಮಿ ನಗರ ಪೊಲೀಸರು ಇಂದು ಯಶಸ್ವಿಯಾಗಿ ಆಯೋಜಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ವಿವಿಧ ವಿಧಗಳು, ಆನ್ಲೈನ್ ವಂಚನೆಗಳಿಂದ ತಪ್ಪಿಸಿಕೊಳ್ಳುವ ವಿಧಾನಗಳು, ಸುರಕ್ಷಿತ ಇಂಟರ್ನೆಟ್ ಬಳಕೆ ಹಾಗೂ ವೈಯಕ್ತಿಕ ಮಾಹಿತಿಯನ್ನು ರಕ್ಷಿಸುವ ಕುರಿತು ವಿವರವಾದ ಮಾಹಿತಿ ನೀಡಲಾಯಿತು.

ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಜಾಗೃತರಾಗಿರಬೇಕು ಎಂದು ತಿಳಿಸಿ, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande