
ವಿಜಯಪುರ, 27 ಮಾರ್ಚ್ (ಹಿ.ಸ.):
ಆ್ಯಂಕರ್ : ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ಜರುಗಿದ ಪರಮಪೂಜ್ಯ ಶ್ರೀ ಭೋಗಲಿಂಗೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸರಳ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್, ಸರಳ ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು, ಅನಗತ್ಯ ಖರ್ಚುಗಳನ್ನು ತಪ್ಪಿಸಿ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನವದಂಪತಿಗಳಿಗೆ ಶುಭ ಹಾರೈಸಿ, ಅವರು ಸುಖಿ ಸಂಸಾರ ನಡೆಸಿ ಸಮಾಜಕ್ಕೆ ಆದರ್ಶವಾಗಲಿ ಎಂದು ಆಶಿಸಿದರು. ಗ್ರಾಮಸ್ಥರು, ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಭಗವಂತನು ಎಲ್ಲರಿಗೂ ಸುಖ-ಶಾಂತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande