
ಬೆಂಗಳೂರು, 28 ಮಾರ್ಚ್ (ಹಿ.ಸ.):
ಆ್ಯಂಕರ್:
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ನಾಗವಾರ ಪ್ರದೇಶದ ಒಟ್ಟು ಪಡಿತರ ಚೀಟಿ- 800 ಹಾಗೂ ಮಂಜುನಾಥನಗರ ಪ್ರದೇಶದ ಒಟ್ಟು ಪಡಿತರ ಚೀಟಿ- 892. ಯಲಹಂಕ ತಾಲ್ಲೂಕಿನ ಕೋಗಿಲು ಪ್ರದೇಶದ ಒಟ್ಟು ಪಡಿತರ ಚೀಟಿ- 819, ದೊಡ್ಡಬೆಟ್ಟಹಳ್ಳಿ ಪ್ರದೇಶದ ಒಟ್ಟು ಪಡಿತರ ಚೀಟಿ- 935 ಹಾಗೂ ವಡೇರಹಳ್ಳಿ (ಗ್ರಾಮೀಣ ಪ್ರದೇಶ) ಒಟ್ಟು ಪಡಿತರ ಚೀಟಿ- 611 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.
ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಏಪ್ರಿಲ್ 27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa