
ಬಾಗಲಕೋಟೆ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಸೋಮವಾರ (ಮಾರ್ಚ್ 30, 2026) ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ವೇಳೆ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಾಗಲಕೋಟೆ ಬಿಜೆಪಿ ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿ ಸರ್ಕಾರ ಕೈಗೊಂಡಿರುವ ಯೋಜನೆಗಳು ಹಾಗೂ ಮುಂದಿನ ಕಾರ್ಯ ಯೋಜನೆಗಳ ಕುರಿತು ಅವರು ವಿವರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande