
ಬಾಗಲಕೋಟೆ, 28 ಮಾರ್ಚ್ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ಮತ ಕ್ಷೇತ್ರದ ರಾಂಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮಸ್ತಿಹಾಳ ಗ್ರಾಮಕ್ಕೆ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಯಾಚನೆ ಮಾಡಿದರು.
ಬಾಗಲಕೋಟೆ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಪಣ ತೊಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಲಹೆಯಂತೆ ಅವರ ಪುತ್ರ ರಾಹುಲ್ ಜಾರಕಿಹೊಳಿ ಗ್ರಾಮದಲ್ಲಿ ಸಭೆ ನಡೆಸಿ ಕಾಂಗ್ರೆಸ್ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ವೇಳೆ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿಗಳು, ದಿವಂಗತ ಮೇಟಿ ಸಾಹೇಬರ ಅಭಿವೃದ್ಧಿ ಕಾರ್ಯಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಸರಳ ಸಜ್ಜನಿಕೆ ಮತ್ತು ಜನಪರ ಕಾಳಜಿಯನ್ನು ಗಮನಿಸಿ ಹೆಚ್ಚಿನ ಮತಗಳ ಅಂತರದಿಂದ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಯುವ ನಾಯಕರುಗಳಾದ ಶ್ರೀಕರ್ ದೇಸಾಯಿ, ಯತೀಶ್ ಮೇಟಿ, ದ್ಯಾಮಣ್ಣ ಗಾಳಿ, ಹನುಮಂತ ಡೋಣಿ, ಅರ್ಜುನ್ ಗುರುನಾಥ್, ಲಕ್ಷ್ಮಣ ನಾಯಕ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ರಾಂಪುರ ಜಿಲ್ಲಾ ಪಂಚಾಯಿತಿ ಉಸ್ತುವಾರಿ ಸೋಮನಾಥ ಕಳ್ಳಿಮನಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande