
ಬಾಗಲಕೋಟೆ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೇವೂರು ಗ್ರಾಮದಲ್ಲಿ ಮತಯಾಚನೆ ನಡೆಸಿದರು.
ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಹೆಚ್ಚಿನ ಮತಗಳ ಅಂತರದಿಂದ ಗೆಲುವು ತಂದುಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ, ಬಾಗಲಕೋಟೆ ಗ್ರಾಮೀಣ ಮಂಡಳದ ಅಧ್ಯಕ್ಷ ಸುರೇಶ್ ಕೊಣ್ಣೂರ, ಮುಖಂಡರಾದ ರಾಜಶೇಖರ ಮುದೇನೂರ, ಡಾ. ಶರಣಬಸಪ್ಪ ಯತ್ನಳ್ಳಿ, ಬಸವರಾಜ ಪರ್ವತಿಮಠ, ಕಲ್ಲಪ್ಪ ಕೊಡಬಾಗಿ, ಶೇಖರಪ್ಪ ಹೆರಕಲ್ಲ ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande