
ಬಾಗಲಕೋಟೆ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಗರದ ವಾರ್ಡ್ ನಂ. 15 ಮತ್ತು 16ರಲ್ಲಿ ಬಿಜೆಪಿ ವತಿಯಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಯಿತು.
ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದ ಸಂಸದ ಗೋವಿಂದ ಕಾರಜೋಳ್, ಮನೆ ಮನೆಗೆ ತೆರಳಿ ಸಾರ್ವಜನಿಕರನ್ನು ಭೇಟಿ ಮಾಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬಾಗಲಕೋಟೆಯ ಭವ್ಯ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಕಮಲದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಆಶೀರ್ವದಿಸಬೇಕು ಎಂದು ಅವರು ಮನವಿ ಮಾಡಿದರು.
ಈ ವೇಳೆ ವಾರ್ಡ್ ನಿವಾಸಿಗಳು ನೀಡಿದ ಆತ್ಮೀಯ ಸ್ವಾಗತ ಮತ್ತು ಅಭೂತಪೂರ್ವ ಬೆಂಬಲದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. ಜನರಿಂದ ದೊರೆತ ಬೆಂಬಲವು ಪಕ್ಷದ ವಿಜಯದ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಅವರು ತಿಳಿಸಿದರು.
ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande