ಕಾರ್–ಅಂಬ್ಯುಲೆನ್ಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ
ಬಾಗಲಕೋಟೆ, 28 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆಯ ನವನಗರದ ಬಳಿ ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ. ನವನಗರದ ಕೇಂದ್ರ ಬಸ್ ನಿಲ್ದಾಣ ವೃತ್ತದ ಬಳಿ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಎದುರುಗಡೆಯಿಂದ ಬರುತ್
ಅಪಘಾತ


ಬಾಗಲಕೋಟೆ, 28 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆಯ

ನವನಗರದ ಬಳಿ ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ನವನಗರದ ಕೇಂದ್ರ ಬಸ್ ನಿಲ್ದಾಣ

ವೃತ್ತದ ಬಳಿ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಎದುರುಗಡೆಯಿಂದ ಬರುತ್ತಿದ್ದ ಅಂಬ್ಯುಲೆನ್ಸ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರೋಗಿಗಳನ್ನು ಹೊತ್ತೊಯ್ಯುತ್ತಿದ್ದ ಅಂಬ್ಯುಲೆನ್ಸ್ ರಸ್ತೆ ಮಧ್ಯದಲ್ಲೇ ಉರುಳಿ ಬಿದ್ದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಅಂಬ್ಯುಲೆನ್ಸ್ನಲ್ಲಿದ್ದ ರೋಗಿಗಳನ್ನು ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರನ್ನು ಹೊರತೆಗೆದು ರಕ್ಷಿಸಿದರು.

ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ರೋಗಿಗಳು ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರ ಸಹಾಯದಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾದರೂ ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande