ಸೆಲೆಬ್ರಿಟಿ ಥ್ರೋಬಾಲ್-ವಾಲಿಬಾಲ್ ಟೂರ್ನಿಗೆ ಚಾಲನೆ
ಬೆಂಗಳೂರು, 28 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ನಗರದಲ್ಲಿ ಇಂದು ಆಯೋಜಿಸಲಾಗಿದ್ದ ‘ಸೆಲೆಬ್ರಿಟಿ ಥ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್’ ಅನ್ನು ದಿನೇಶ್ ಗುಂಡೂರಾವ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನತೆ ಆರೋಗ್ಯಕರ ಮನೋಭಾವದೊಂದಿಗೆ ಸ್
Tournament


ಬೆಂಗಳೂರು, 28 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ನಗರದಲ್ಲಿ ಇಂದು ಆಯೋಜಿಸಲಾಗಿದ್ದ ‘ಸೆಲೆಬ್ರಿಟಿ ಥ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್’ ಅನ್ನು ದಿನೇಶ್ ಗುಂಡೂರಾವ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನತೆ ಆರೋಗ್ಯಕರ ಮನೋಭಾವದೊಂದಿಗೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕ್ರೀಡೆ ಎಂದರೆ ಕೇವಲ ಗೆಲುವು-ಸೋಲುಗಳಿಗೆ ಸೀಮಿತವಲ್ಲ, ಅದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಪರಸ್ಪರ ಸಾಮರಸ್ಯವನ್ನು ಬೆಳೆಸುವ ಶಕ್ತಿಯುತ ಮಾಧ್ಯಮವಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಒತ್ತಡದ ಜೀವನಶೈಲಿಯಲ್ಲಿ ಇಂತಹ ಕ್ರೀಡಾಕೂಟಗಳು ಹೊಸ ಉತ್ಸಾಹವನ್ನು ತುಂಬುತ್ತವೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ದೈಹಿಕ ಹಾಗೂ ಮಾನಸಿಕ ದೃಢತೆ ಅತ್ಯಗತ್ಯವಾಗಿದ್ದು, ಅದನ್ನು ಬೆಳೆಸುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಹೇಳಿದರು.

ಟೂರ್ನಮೆಂಟ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಹಾಗೂ ಕಲಾ ಕ್ಷೇತ್ರದ ಗಣ್ಯರು ತೋರಿದ ಕ್ರೀಡಾ ಮನೋಭಾವ ಶ್ಲಾಘನೀಯವಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande