ಕೋಲಾರ ಜಿಲ್ಲೆಯಲ್ಲಿ ಅನಧಿಕೃತ ಕ್ಲಿನಿಕ್ಗಳ ವಿರುದ್ಧ ಕ್ರಮ
ಕೋಲಾರ ಜಿಲ್ಲೆಯಲ್ಲಿ ಅನಧಿಕೃತ ಕ್ಲಿನಿಕ್ಗಳ ವಿರುದ್ಧ ಕ್ರಮ
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ


ಕೋಲಾರ, ೨೮ (ಹಿ.ಸ):

ಆ್ಯಂಕರ್ : ಜಿಲ್ಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಕ್ರಮ ಹಾಗೂ ನೋಂದಣಿ ಇಲ್ಲದ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ನೋಂದಣಿ ಪ್ರಾಧಿಕಾರ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ೧೨೦ಕ್ಕೂ ಹೆಚ್ಚು ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ೧೫೨ ಅನಧಿಕೃತ ಕ್ಲಿನಿಕ್ಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ವ್ಯಾಪಕ ಕಾರ್ಯಾಚರಣೆ ನಡೆಸಲಾಗಿದೆ. ಗುರುತಿಸಲಾದ ೧೫೨ ಸಂಸ್ಥೆಗಳ ಪೈಕಿ ೧೨೦ ಕ್ಲಿನಿಕ್ಗಳನ್ನು ಈಗಾಗಲೇ ಸಂಪೂರ್ಣವಾಗಿ ಮುಚ್ಚಲಾಗಿದೆ. ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ೧೮ ಪ್ರಕರಣಗಳಲ್ಲಿ ಪಿಸಿಆರ್ (Pಅಖ) ಹಾಗೂ ಎಫ್ಐಆರ್ (ಈIಖ) ದಾಖಲಿಸಿ ಕಾನೂನು ಪ್ರಕ್ರಿಯೆ ಚುರುಕುಗೊಳಿಸಲಾಗಿದೆ.

ನಿಯಮಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಗಳಿಗೆ ೨,೦೦,೦೦೦ ರೂ. ಗಳ ದಂಡವನ್ನು ವಿಧಿಸಿ ವಸೂಲಿ ಮಾಡಲಾಗಿದೆ. ನೋಟಿಸ್ ನೀಡಿದ ನಂತರ ೨೩ ಕ್ಲಿನಿಕ್ಗಳು ಅಧಿಕೃತವಾಗಿ ನೋಂದಣಿ ಮಾಡಿಸಿಕೊಂಡಿದ್ದು, ಉಳಿದ ೯ ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ.

ಅತಿ ಹೆಚ್ಚು ಅನಧಿಕೃತ ಕ್ಲಿನಿಕ್ಗಳು ಮುಳಬಾಗಿಲು (೩೨) ಹಾಗೂ ಕೋಲಾರ (೩೧) ತಾಲೂಕುಗಳಲ್ಲಿ ಪತ್ತೆಯಾಗಿದ್ದು, ಮುಳಬಾಗಿಲಿನಲ್ಲಿ ಅತಿ ಹೆಚ್ಚು ಅಂದರೆ ೯ ಎಫ್ಐಆರ್ ದಾಖಲಿಸಲಾಗಿದೆ. ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ತಲಾ ೫೦,೦೦೦ ರೂ. ದಂಡ ವಿಧಿಸಲಾಗಿದೆ.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಅಧಿಕೃತ ಪರವಾನಗಿ ಇಲ್ಲದೆ ವೈದ್ಯಕೀಯ ಸೇವೆ ನೀಡುತ್ತಿರುವುದು ಕಂಡುಬAದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande