ಹಮಾಲರ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಆರ್.ಬಿ. ತಿಮ್ಮಾಪೂರ ಮತಯಾಚನೆ
ಬಾಗಲಕೋಟೆ, 28 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರವನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರು ಇಂದು ಹಮಾಲರ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ
ಸಬೆ


ಬಾಗಲಕೋಟೆ, 28 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರವನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರು ಇಂದು ಹಮಾಲರ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಚುನಾವಣಾ ಪ್ರಚಾರ ನಡೆಸಿದರು.

ಈ ವೇಳೆ ಹಮಾಲರ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರೊಂದಿಗೆ ಸಂವಾದ ನಡೆಸಿದ ಸಚಿವರು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಹಮಾಲರ ಕಾಲೋನಿಯ ಜನರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲು ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡಬೇಕು ಎಂದು ಹೇಳಿದರು.

ಪ್ರಚಾರದ ವೇಳೆ ಮಾಜಿ ಸಚಿವ ಅಜಯ್ ಕುಮಾರ್ ಸರನಾಯಕ್, ಕಾಂಗ್ರೆಸ್ ಮುಖಂಡ ಭರಮು ಪೂಜಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande