
ಬಾಗಲಕೋಟೆ, 28 ಮಾರ್ಚ್ (ಹಿ.ಸ.):
ಆ್ಯಂಕರ್ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನಮಠ ಹಾಗೂ ಮಲ್ಲಿಕಾರ್ಜುನ ಚರಂತಿಮಠ ನೇತೃತ್ವದಲ್ಲಿ ಬೃಹತ್ ಚುನಾವಣಾ ಪ್ರಚಾರ ನಡೆಯಿತು.
ನಗರದ ಕಿಲ್ಲಾ ಓಣಿಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಆರಂಭಿಸಿದ ಮುಖಂಡರು ಮನೆ-ಮನೆಗೆ ತೆರಳಿ ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಕ್ಷೇತ್ರದ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳನ್ನು ಮುಂದುವರೆಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಅಗತ್ಯವಿದೆ ಎಂದು ಅವರು ಹೇಳಿದರು. ಪ್ರಚಾರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮುಖಂಡರಾದ ಮಲ್ಲಿಕಾರ್ಜುನ ಮೇಟಿ, ಮಲ್ಲಿಕಾರ್ಜುನ ಚರಂತಿಮಠ, ನಾಗರಾಜ ಹದ್ಲಿ, ಸಂಜೀವ ವಾಡ್ಕರ, ರಮೇಶ ಬದ್ನೂರ, ನಕಾಶ, ರಾಜು ಮನ್ನಿಕೇರಿ, ಕೇಶವ ಕುಲಕರ್ಣಿ, ರಮೇಶ ಪಡಸಲಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande