ಹಾನಗಲ್ನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕ ಸಾಮಗ್ರಿ ವಿತರಣೆ
ಹಾವೇರಿ, 28 ಮಾರ್ಚ್ (ಹಿ.ಸ.): ಆ್ಯಂಕರ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕಳ ಪೋಷಣೆಯೊಂದಿಗೆ ಆರೋಗ್ಯ ಕಾಳಜಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಮಹತ್ವದ ಕಾರ್ಯಕ್ರಮ ನಡೆಯಿತು. ಶಿಶು ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಎಲ
ಹಾನಗಲ್ನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕ ಸಾಮಗ್ರಿ ವಿತರಣೆ


ಹಾವೇರಿ, 28 ಮಾರ್ಚ್ (ಹಿ.ಸ.):

ಆ್ಯಂಕರ್:

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕಳ ಪೋಷಣೆಯೊಂದಿಗೆ ಆರೋಗ್ಯ ಕಾಳಜಿಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಮಹತ್ವದ ಕಾರ್ಯಕ್ರಮ ನಡೆಯಿತು.

ಶಿಶು ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಎಲ್ಲಾ 315 ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನೀರು ಶುದ್ಧೀಕರಣ ಯಂತ್ರಗಳು, ಸ್ಟೇನಲೆಸ್ ಸ್ಟೀಲ್ ಉಪಕರಣಗಳ ಸಂಗ್ರಹ, ತೂಕದ ಯಂತ್ರಗಳು ಹಾಗೂ ಮಕ್ಕಳ ಎತ್ತರ ಅಳೆಯುವ ಸಾಧನಗಳನ್ನು ಸೇರಿದಂತೆ ವಿವಿಧ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ ಮಾನೆ ಅವರು, ಗ್ರಾಮೀಣ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೋಷಣೆಗೆ ಸರ್ಕಾರ ಬದ್ಧವಾಗಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಉತ್ತಮ ಸೇವೆ ನೀಡಲು ಇಂತಹ ಸೌಲಭ್ಯಗಳು ಅತ್ಯಂತ ಅಗತ್ಯವೆಂದು ಹೇಳಿದರು. ಈ ಉಪಕರಣಗಳ ಬಳಕೆಯಿಂದ ಮಕ್ಕಳ ಬೆಳವಣಿಗೆಯನ್ನು ಸರಿಯಾಗಿ ಗಮನಿಸಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ಸ್ಥಳೀಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande