ಉಪಚುನಾವಣೆ ಹಿನ್ನೆಲೆ: ಬಾಗಲಕೋಟೆ ಜಿಲ್ಲೆಯಲ್ಲಿ ಪೊಲೀಸ್ ಪಥಸಂಚಲನ
ಬಾಗಲಕೋಟೆ, 28 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಪಡೆ ಹಾಗೂ ಸ್ಥಳೀಯ ಪೊಲೀಸರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಯಿತು. ಬಾಗಲಕೋಟೆ ನಗರ, ನವ
ಪಥ ಸಂಚಲನ


ಬಾಗಲಕೋಟೆ, 28 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಪಡೆ ಹಾಗೂ ಸ್ಥಳೀಯ ಪೊಲೀಸರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಯಿತು.

ಬಾಗಲಕೋಟೆ ನಗರ, ನವನಗರ ಹಾಗೂ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಬೇವೂರ, ಚೌಡಾಪೂರ ಗ್ರಾಮಗಳು ಸೇರಿದಂತೆ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಐಹೊಳೆ ಮತ್ತು ಮೂಗನೂರ ಗ್ರಾಮಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಥಸಂಚಲನ ನಡೆಸಿದರು.

ಉಪಚುನಾವಣೆ ಸಂದರ್ಭದಲ್ಲಿ ಶಾಂತಿ ಹಾಗೂ ಭದ್ರತೆ ಕಾಪಾಡಲು ಹಾಗೂ ಮತದಾರರಲ್ಲಿ ಭದ್ರತಾ ಭಾವನೆ ಮೂಡಿಸುವ ಉದ್ದೇಶದಿಂದ ಈ ಪಥಸಂಚಲನ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande