ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು, 28 ಮಾರ್ಚ್ (ಹಿ.ಸ.): ಆ್ಯಂಕರ್:ಶಿಶು ಅಭಿವೃದ್ಧಿ ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಗೌರವಧನ ಆಧಾರಿತ ಮೇಲೆ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 56 ಸಹಾಯಕಿಯರ ಹುದ್ದೆಗಳ ನೇಮಕಾತಿಗಾ
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಬೆಂಗಳೂರು, 28 ಮಾರ್ಚ್ (ಹಿ.ಸ.):

ಆ್ಯಂಕರ್:ಶಿಶು ಅಭಿವೃದ್ಧಿ ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಗೌರವಧನ ಆಧಾರಿತ ಮೇಲೆ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 56 ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಏಪ್ರಿಲ್ 06 ಸಂಜೆ 5.30 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಿಬಿಎಂಪಿ ಕಟ್ಟಡ, ಮೊದಲಬೇ ಮಹಡಿ, ಎನ್.ಆರ್.ಕಾಲೋನಿ, ಬೆಂಗಳೂರು-19 ಇಲ್ಲಿ ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 080- 26601917 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande