
ವಿಜಯಪುರ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಕಳೆದ ಒಂದು ವಾರದಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ದ್ರಾಕ್ಷಿ ಮತ್ತು ಬಾಳೆ ಸಂಪೂರ್ಣವಾಗಿ ನಾಶವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಕರ್ನಾಟಕ ರೈತ ಸಂಘ ಪ್ರತಿಭಟನೆ ನಡೆಸಿ ಮನವಿಯನ್ನು ಸಲ್ಲಿಸಿದರು.
ಮಳೆಯಿಂದಾಗಿ ಜಿಲ್ಲೆಯಾದ್ಯಂತ ತೋಟಗಾರಿಕಾ ಬೆಳೆಗಳು ಹಾಳಾಗಿದ್ದರೆ ಇತ್ತ ಕೋಲ್ಹಾರ ತಾಲ್ಲೂಕಿನ ಮಸೂತಿ ಗ್ರಾಮದ ರೈತನ ಜಮೀನಲ್ಲಿ ಹಾಯ್ದು ಹೋಗಿರುವ ಹೆಚ್ಚು ವಿದ್ಯುತ್ ಪ್ರಸರಣವಿರುವ ತಂತಿ ಗಾಳಿಗೆ ಶ್ರೀಗಂಧದ ಮರಗಳಿಗೆ ತಗುಲಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.
ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ವೆ ನಡೆಸುವ ಮೂಲಕ ಬೆಳೆ ಹಾನಿ ಹಾಗೂ ಅಗ್ನಿ ಅವಘಡ ಕುರಿತು ಸರ್ಕಾರ ಪರಿಹಾರ ನೀಡಬೇಕು ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande