ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಟೂರ್ನಿ: ಲಾಂಛನ ಅನಾವರಣ
ತುಮಕೂರು, 28 ಮಾರ್ಚ್ (ಹಿ.ಸ.): ಆ್ಯಂಕರ್: ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ಟೆನಿಸ್ ಟೂರ್ನಿಮೆಂಟ್‌ಗೆ ಚಾಲನೆ ದೊರೆತಿದ್ದು, “ತುಮಕೂರು ಓಪನ್ ಚಾಂಪಿಯನ್‌ಷಿಪ್” ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಅನಾವರಣಗೊಳಿಸಿದರು. ಅಂತಾರಾಷ್ಟ್ರೀಯ ಮಟ್ಟದ ಟೆನಿಸ್
Logo launch


ತುಮಕೂರು, 28 ಮಾರ್ಚ್ (ಹಿ.ಸ.):

ಆ್ಯಂಕರ್:

ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಅಂತರಾಷ್ಟ್ರೀಯ ಮಹಿಳಾ ಟೆನಿಸ್ ಟೂರ್ನಿಮೆಂಟ್‌ಗೆ ಚಾಲನೆ ದೊರೆತಿದ್ದು, “ತುಮಕೂರು ಓಪನ್ ಚಾಂಪಿಯನ್‌ಷಿಪ್” ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಅನಾವರಣಗೊಳಿಸಿದರು.

ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ಕ್ರೀಡಾಂಗಣ ನಿರ್ಮಾಣದ ಬಳಿಕ ತುಮಕೂರಿನಲ್ಲಿ ನಡೆಯುತ್ತಿರುವ ಈ ಮೊದಲ ವಿಶ್ವ ಮಟ್ಟದ ಕ್ರೀಡಾಕೂಟ ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ.

ತುಮಕೂರು ಜಿಲ್ಲಾಡಳಿತ, ತುಮಕೂರು ಟೆನಿಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಷನ್ ಸಹಕಾರದಲ್ಲಿ ಮೇ 3ರಿಂದ 10ರವರೆಗೆ ಟೂರ್ನಿಮೆಂಟ್ ನಡೆಯಲಿದ್ದು, ವಿಶ್ವದ ವಿವಿಧ ದೇಶಗಳಿಂದ 100ಕ್ಕೂ ಹೆಚ್ಚು ಆಟಗಾರ್ತಿಯರು ಭಾಗವಹಿಸಲಿದ್ದಾರೆ.

ಈ ಟೂರ್ನಿಯಲ್ಲಿ ವಿಜೇತರಿಗೆ 35 ರ‍್ಯಾಂಕಿಂಗ್ ಪಾಯಿಂಟ್‌ಗಳು ಹಾಗೂ 30 ಸಾವಿರ ಅಮೆರಿಕಾ ಡಾಲರ್ ಬಹುಮಾನ ನೀಡಲಾಗುತ್ತದೆ. ಇತರ ಸ್ಥಾನಗಳಿಗೆ ಅಂತಾರಾಷ್ಟ್ರೀಯ ರ‍್ಯಾಂಕಿಂಗ್ ಪಾಯಿಂಟ್‌ಗಳೂ ಲಭ್ಯವಾಗಲಿವೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande