
ಮೈಸೂರು, 28 ಮಾರ್ಚ್ (ಹಿ.ಸ.):
ಆ್ಯಂಕರ್:
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೊಡ್ಡಕೆರೆ ಮೈದಾನದಲ್ಲಿ ಬೃಹತ್ ವರ್ತುಲ ರಸ್ತೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರು ಚಾಲನೆ ನೀಡಿದರು.
ನಗರದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಈ ಅಭಿಯಾನದಲ್ಲಿ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು.
ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲರೂ ಮೈದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಸದ ಸಂಗ್ರಹಣೆ, ಶುದ್ಧೀಕರಣ ಹಾಗೂ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಈ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಲಾಯಿತು.
ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ ಸಾರ್ವಜನಿಕರು ಸಹ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa