
ವಿಜಯಪುರ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ಮಾರ್ಚ್ 29 ರವಿವಾರ ಮತ್ತು ಮಾರ್ಚ್ 30 ಸೋಮವಾರ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮಾರ್ಚ್ 29 ರವಿವಾರ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಚಾರ ನಡೆಸಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ನವನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ನವನಗರದ ಸೆಕ್ಟರ್ ನಂ.27 ರ ಆರ್ಯಭಟ್ ಶಾಲೆ ಸಮೀಪ ಶರಣಪ್ಪ ಕುದರಿಕನ್ನೂರ ಅವರ ನಿವಾಸದಲ್ಲಿ ಸಮಾಜ ಮುಖಂಡರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ವಿದ್ಯಾಗಿರಿಯ ಮುತ್ತು ಜೋಳದ ಅವರ ಮನೆಯಲ್ಲಿ ಸಮಾಜ ಮುಖಂಡರ ಸಭೆ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಕೃಷಿ ಮಾರುಕಟ್ಟೆ ವೃತ್ತದ ಬಳಿ ಅಬ್ದುಲರಜಾಕ್ ಬಾಳಿಕಾಯಿ ಅವರ ಮನೆಯಲ್ಲಿ ಸಮಾಜ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬೆನಕಟ್ಟಿ ಗ್ರಾಮ, ಸಂಜೆ 5 ಗಂಟೆಗೆ ಹಳ್ಳೂರ ಗ್ರಾಮ ಹಾಗೂ ಸಂಜೆ 6 ಗಂಟೆಗೆ ಬೇವೂರ ಗ್ರಾಮಗಳಲ್ಲಿ ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನಂತರ ಆಲಮಟ್ಟಿ–ನಿಡಗುಂದಿ ಮಾರ್ಗವಾಗಿ ವಿಜಯಪುರಕ್ಕೆ ಪ್ರಯಾಣಿಸಿ ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮಾರ್ಚ್ 30 ಸೋಮವಾರ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ವಿಜಯಪುರದಲ್ಲಿರುವ ಸಚಿವರ ನಿವಾಸದಲ್ಲಿ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯುವ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande