ಇಂದು ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
ನವದೆಹಲಿ, 28 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಜೇವರ್‌ನಲ್ಲಿ ನಿರ್ಮಿತ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಯ ಬಳಿಕ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ
ನೋಯ್ಡಾ airport


ನವದೆಹಲಿ, 28 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಜೇವರ್‌ನಲ್ಲಿ ನಿರ್ಮಿತ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಯ ಬಳಿಕ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಈ ಯೋಜನೆಯನ್ನು ಉತ್ತರ ಪ್ರದೇಶ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಎಂದು ಹೇಳಿದ್ದು, ಇದು ವ್ಯಾಪಾರ ಮತ್ತು ಸಂಪರ್ಕಕ್ಕೆ ಹೊಸ ಚೈತನ್ಯ ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ, ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಸಂಚಾರ ಒತ್ತಡವನ್ನು ಕಡಿಮೆ ಮಾಡುವಲ್ಲಿ ಈ ವಿಮಾನ ನಿಲ್ದಾಣ ಸಹಾಯಕವಾಗಲಿದೆ ಎಂದಿದ್ದಾರೆ.

ಸುಮಾರು ₹11,200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಯೋಜನೆ ದೇಶದ ಅತಿದೊಡ್ಡ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾದ ಈ ವಿಮಾನ ನಿಲ್ದಾಣದ ಮೊದಲ ಹಂತವು ವಾರ್ಷಿಕ 12 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಭವಿಷ್ಯದಲ್ಲಿ 70 ಮಿಲಿಯನ್‌ಗೆ ವಿಸ್ತರಿಸುವ ಯೋಜನೆ ಇದೆ.

3,900 ಮೀಟರ್ ಉದ್ದದ ರನ್‌ವೇ ಹೊಂದಿರುವ ಈ ವಿಮಾನ ನಿಲ್ದಾಣವು ದೊಡ್ಡ ವಿಮಾನಗಳ ಸಂಚಾರಕ್ಕೂ ಅನುಕೂಲವಾಗಿದ್ದು, ಅತ್ಯಾಧುನಿಕ ನ್ಯಾವಿಗೇಷನ್ ಮತ್ತು ಲೈಟಿಂಗ್ ವ್ಯವಸ್ಥೆಗಳಿಂದ 24x7 ಕಾರ್ಯಾಚರಣೆ ಸಾಧ್ಯವಾಗಲಿದೆ. ರಸ್ತೆ, ರೈಲು, ಮೆಟ್ರೋ ಸೇರಿದಂತೆ ಬಹುಮಾಧ್ಯಮ ಸಾರಿಗೆ ವ್ಯವಸ್ಥೆಗಳೊಂದಿಗೆ ಸಂಪರ್ಕ ಕಲ್ಪಿಸುವ ರೀತಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಇದಲ್ಲದೆ, ವಿಮಾನ ನಿಲ್ದಾಣದಲ್ಲಿ ಪ್ರಾರಂಭಿಕ ಹಂತದಲ್ಲಿ ವಾರ್ಷಿಕ 2.5 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಣೆ ಸಾಮರ್ಥ್ಯವಿದ್ದು, ಭವಿಷ್ಯದಲ್ಲಿ 1.8 ಮಿಲಿಯನ್ ಮೆಟ್ರಿಕ್ ಟನ್‌ಗೆ ಹೆಚ್ಚಿಸುವ ಗುರಿಯಿದೆ. 40 ಎಕರೆ ವ್ಯಾಪ್ತಿಯ

ಎಂಆರ್ ಒ ಕೇಂದ್ರವೂ ನಿರ್ಮಾಣಗೊಂಡಿದೆ.

ಪರಿಸರ ಸ್ನೇಹಿ ಯೋಜನೆಯಾಗಿ ರೂಪುಗೊಂಡಿರುವ ಈ ವಿಮಾನ ನಿಲ್ದಾಣವನ್ನು ‘ನೆಟ್-ಜೀರೋ ಎಮಿಷನ್’ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ. ಯಮುನಾ ಎಕ್ಸ್‌ಪ್ರೆಸ್‌ವೇ ಸಮೀಪದಲ್ಲಿರುವ ಈ ವಿಮಾನ ನಿಲ್ದಾಣವು ಭಾರತವನ್ನು ಜಾಗತಿಕ ವಾಯುಯಾನ ಕೇಂದ್ರವಾಗಿ ರೂಪಿಸುವತ್ತ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande