ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು:ಶಾಸಕ ಯಶವಂತರಾಯಗೌಡ ಪಾಟೀಲ್
ವಿಜಯಪುರ, 28 ಮಾರ್ಚ್ (ಹಿ.ಸ.) ಆ್ಯಂಕರ್ : ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ನಾವು ಬದ್ಧರಾಗಿದ್ದು, ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗೋಳಸಾರ
ರಸ್ತೆ


ವಿಜಯಪುರ, 28 ಮಾರ್ಚ್ (ಹಿ.ಸ.)

ಆ್ಯಂಕರ್ : ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ನಾವು ಬದ್ಧರಾಗಿದ್ದು, ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ

ತಾಲೂಕಿನ ಗೋಳಸಾರ ಗ್ರಾಮದಲ್ಲಿ 2025–26ನೇ ಸಾಲಿನ ಲೆಕ್ಕ ಶೀರ್ಷಿಕೆ 5054ರ ಯೋಜನೆಯಡಿ ಅಂದಾಜು ₹1.50 ಕೋಟಿ ವೆಚ್ಚದಲ್ಲಿ ಗೋಳಸಾರದಿಂದ ಅರ್ಜುಣಗಿ ಗ್ರಾಮಕ್ಕೆ ಹೋಗುವ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದ ರಸ್ತೆಗಳು ಜನರ ಸಂಚಾರಕ್ಕೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕಾಮಗಾರಿ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರೂ ಕೂಡ ಮುಂದೆ ನಿಂತು ಗುಣಮಟ್ಟ ಕಾಪಾಡಿಕೊಳ್ಳುವಂತೆ ಗಮನ ಹರಿಸಬೇಕು ಎಂದು ತಿಳಿಸಿದರು.

ದೇಶದ ಅಭಿವೃದ್ಧಿಗೆ ಗ್ರಾಮಗಳ ಅಭಿವೃದ್ಧಿ ಅತ್ಯಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರಕಿದಾಗ ಮಾತ್ರ ಜನರು ಅಭಿವೃದ್ಧಿ ಹೊಂದಲು ಸಾಧ್ಯ. ನಮ್ಮ ಮತ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ನಾವು ಬದ್ಧರಾಗಿದ್ದು, ಮೂಲ ಸೌಲಭ್ಯಗಳನ್ನು ಒದಗಿಸಲು ಶ್ರಮಿಸಲಾಗುವುದು ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಗೋಳಸಾರ ಮಠದ ಅಭಿನವ ಪುಂಡಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಎಂ.ಆರ್. ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕೌಲಗಿ, ಜಾವೀದ ಮೋಮಿನ, ಇಲಿಯಾಸ್ ಬೊರಾಮಣಿ, ಗೌಡಪ್ಪಗೌಡ ಪಾಟೀಲ, ಎಸಿ ಚಿದಾನಂದ ಗುರುಸ್ವಾಮಿ, ಇಇ ಮನೋಜಕುಮಾರ ಗಡಬಳ್ಳಿ, ಎಇಇ ಶಿವಾಜಿ ಬನಸೋಡೆ, ಹೆಸ್ಕಾಂ ಎಇಇ ಎಸ್.ಆರ್. ಮೇಡೆಗಾರ, ಎಇಇ ದಯಾನಂದ ಮಠ, ಕಾಶಿನಾಥ ಮೇತ್ರಿ, ಸಂಗಣ್ಣ ತೆಗ್ಗೆಳ್ಳಿ, ಶಿವಲಿಂಗಯ್ಯ ಹಿರೇಮಠ, ಭೀಮು ಅಂದೋಡಗಿ, ಸಂಗು ಪಾಟೀಲ, ಬೋಗಪ್ಪ ಬಟ್ಟರಕಿ, ಪುಂಡುಸಾಹುಕಾರ ನಿಂಬರಗಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande