ಸಿಂದಗಿ ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಸೂಚನಾ ಫಲಕಗಳು: ಅಪಘಾತ ಕಡಿತಕ್ಕೆ ಪೊಲೀಸ್ ಕ್ರಮ
ವಿಜಯಪುರ, 28 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂದಗಿ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ವಿವಿಧ ಟ್ರಾಫಿಕ್ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಸಿಂದಗಿ ನಗರದ ಪ್ರಮುಖ ರಸ್ತೆ ಹಾಗೂ ಸಂಚಾರ ದಟ್ಟಣ
ಫಲಕ


ವಿಜಯಪುರ, 28 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂದಗಿ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ವಿವಿಧ ಟ್ರಾಫಿಕ್ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಸಿಂದಗಿ ನಗರದ ಪ್ರಮುಖ ರಸ್ತೆ ಹಾಗೂ ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲಿ ವಾಹನ ನಿಲುಗಡೆ ಸ್ಥಳ ಹಾಗೂ ವಾಹನ ನಿಲುಗಡೆ ನಿಷೇಧಿಸಿದ ಸ್ಥಳಗಳಲ್ಲಿ ಫಲಕಗಳು, ಎಡಕ್ಕೆ ಚಲಿಸಲು ಸೂಚಿಸುವ ಗುರುತಿನ ಫಲಕಗಳು ಸೇರಿದಂತೆ ಹಲವು ಮಾರ್ಗಸೂಚಿ ಫಲಕಗಳನ್ನು ಸ್ಥಾಪಿಸಲಾಗಿದೆ.

ಇದರಿಂದ ವಾಹನ ಸಂಚಾರವನ್ನು ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಇದರ ಜೊತೆಗೆ ಸಿಂದಗಿ ನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಯುವ ದೃಷ್ಟಿಯಿಂದ ಅಪಘಾತ ವಲಯ ಸೂಚನಾ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಈ ಕ್ರಮದಿಂದ ವಾಹನ ಸವಾರರಲ್ಲಿ ಎಚ್ಚರಿಕೆ ಹೆಚ್ಚಿಸಿ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.

ಸಾರ್ವಜನಿಕರಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಇಂತಹ ಕ್ರಮಗಳನ್ನು ಮುಂದುವರೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande