
ವಿಜಯಪುರ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ವಿಜಯಪುರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಿಂದಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಂದಗಿ ಶಾಸಕ ಅಶೋಕ ಮನಗೂಳಿ, ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಾಹಿತ್ಯ ಮತ್ತು ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಸಮ್ಮೇಳನಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಸಮ್ಮೇಳನದ ಆಯೋಜನೆ, ಕಾರ್ಯಕ್ರಮಗಳ ರೂಪರೇಷೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande