
ಮೈಸೂರು, 28 ಮಾರ್ಚ್ (ಹಿ.ಸ.):
ಆ್ಯಂಕರ್:
ಈ ವರ್ಷದಿಂದಲೇ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಲೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ . ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa