
ಹೊಸಪೇಟೆ, 29 ಮಾರ್ಚ್ (ಹಿ.ಸ.)
ಆ್ಯಂಕರ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಂದ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ತರಬೇತಿ ಅವಧಿಯಲ್ಲಿ 34 ದಿನಗಳ ಬ್ಯೂಟಿಪಾರ್ಲರ್ ತರಬೇತಿ ಹಾಗೂ 31 ದಿನಗಳ ಮೊಬೈಲ್ ರಿಪೇರಿ ತರಬೇತಿ ನೀಡಲಾಗುವುದು. ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ತರಬೇತಿ ವೇಳೆಯಲ್ಲಿ ಊಟದ ವ್ಯವಸ್ಥೆಯೂ ಸಹ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ: ಅರ್ಜಿದಾರರು 18 ರಿಂದ 50 ವರ್ಷಗಳ ಮೀರಿರಬಾರದು. ಕನಿಷ್ಠ 8ನೇ ತರಗತಿ ವಿದ್ಯಾಭ್ಯಾಸ ಹೊಂದಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿರುವುದರ ಜತೆಗೆ ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಏಪ್ರಿಲ್ 06 ರಂದು ಆಯ್ಕೆ ಪ್ರಕ್ರಿಯೆ ಸಂದರ್ಶನ ನಡೆಸಲಾಗುವುದು. ಏಪ್ರಿಲ್ 08 ರಿಂದ ತರಬೇತಿ ಆರಂಭವಾಗಲಿದೆ.
ಆಸಕ್ತರು ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ ಪೋರ್ಟ್ ಸೈಜ್ 3 ಇತ್ತೀಚಿನ ಭಾವಚಿತ್ರ, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಜೆರಾಕ್ಸ್ ಪ್ರತಿಗಳೊಂದಿಗೆ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣ, ಪೈ-ಹೋಟೆಲ್ ಎದುರು ಬಸ್ ನಿಲ್ದಾಣ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9663471468, 6360467103, 9741987137 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್